ಕಂಕನಾಡಿ ದುರಂತದ ಸ್ಥಳಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ, ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಣೆ - Karavali Times ಕಂಕನಾಡಿ ದುರಂತದ ಸ್ಥಳಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ, ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಣೆ - Karavali Times

728x90

1 July 2026

ಕಂಕನಾಡಿ ದುರಂತದ ಸ್ಥಳಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ, ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಣೆ

ಮಂಗಳೂರು, ಜುಲೈ 01, 2026 (ಕರಾವಳಿ ಟೈಮ್ಸ್) : ಪ್ರಕೃತಿ ವಿಕೋಪಗಳು ಅನಿರೀಕ್ಷಿತವಾಗಿ ಆಗುತ್ತಿವೆ. ದುರಂತಗಳು ಎಂದಿಗೂ ನಡೆಯಬಾರದು. ನಾಗೂರಿ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಮೃತರ ಕುಟುಂಬದ ದುಃಖದ ಜೊತೆ ನಾವು ಯಾವತ್ತೂ ಇದ್ದೇವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಯು ಟಿ ಖಾದರ್ ಫರೀದ್ ಹೇಳಿದ್ದಾರೆ. 

ನಾಗೂರಿ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಅಪಾಯಕಾರಿ ಪ್ರದೇಶಗಳಿದ್ದಲ್ಲಿ ಜನ ಯಾವುದೇ ಕಾರಣಕ್ಕೂ ಇಲಾಖೆ, ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳ ಬರುವಿಕೆಗಾಗಿ ಕಾಯದೆ ತಮ್ಮ ಸುರಕ್ಷತೆಯ ಜವಾಬ್ದಾರಿಯನ್ನು ತಾವೇ ಪಡೆದುಕೊಂಡು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಬೇಕು ಎಂದರು.

ಈ ಸಂದರ್ಭ ಎಂಎಲ್ಸಿ ಡಾ ಮಂಜುನಾಥ ಭಂಡಾರಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್, ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಕಂಕನಾಡಿ ದುರಂತದ ಸ್ಥಳಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ, ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಣೆ Rating: 5 Reviewed By: karavali Times
Scroll to Top