ಬಂಟ್ವಾಳ, ಜುಲೈ 07, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ಕಳೆದ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂಬಾತನನ್ನು ವಿಟ್ಲ ಠಾಣಾ ಸಿಬ್ಬಂದಿಗಳಾದ ಜಯರಾಮ,ವೆಂಕಪ್ಪ ಹಾಗೂ ಶಿವಾನಂದ ಅವರು ಜುಲೈ 6 ರಂದು ಮಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
7 July 2026
- Blogger Comments
- Facebook Comments
Subscribe to:
Post Comments (Atom)















0 comments:
Post a Comment