11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು - Karavali Times 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು - Karavali Times

728x90

13 July 2026

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು

ಮಂಗಳೂರು, ಜುಲೈ 13, 2026 (ಕರಾವಳಿ ಟೈಮ್ಸ್) : 11 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ 6 ಪ್ರಕರಣಗಳ ಕುಖ್ಯಾತ ಆರೋಪಿಯೋರ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಶಾಹುಲ್ ಹಮೀದ್ ಎಂದು ಹೆಸರಿಸಲಾಗಿದೆ. ಆರೋಪಿಯ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಕಾಂಚನ ಟೆಕ್ಸ್ಟ್ ಟೈಲ್ಸ್ ವ್ಯವಸ್ಥಾಪಕ ದಿನೇಶ್ ರಾಜ್ ಹತ್ಯೆ ಪ್ರಕರಣವೂ ಸೇರಿದೆ. ಈ ಪ್ರಕರಣ ಸೇರಿದಂತೆ 3 ಪ್ರಕರಣಗಳಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ಘೋಷಣಾ ವಾರಂಟ್ ಹೊರಡಿಸಿತ್ತು.

ಶಾಹುಲ್ ಹಮೀದ್ ವಿರುದ್ಧ ಅಪಹರಣ, ಸುಲಿಗೆ, ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ, ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಜೈಲಿನಲ್ಲಿ ಶಶಿಕಿರಣ್ ಅವರ ಮೇಲೆ ನಡೆದ ಕೊಲೆಯತ್ನ ಪ್ರಕರಣದಲ್ಲಿ ಈತನ ವಿರುದ್ದ 307 ಸೆಕ್ಷನ್ ದಾಖಲಾಗಿದೆ. 

ಈತನ ವಿರುದ್ಧ ದಾಖಲಾಗಿರುವ 6 ಪ್ರಕರಣಗಳ ಪೈಕಿ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ 3 ಪ್ರಕರಣಗಳು, ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗೂ ಮಂಗಳೂರು ಉತ್ತರ ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣ, ಬರ್ಕೆ ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣ ಸೇರಿವೆ. 

ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಹಿಂದೆ ನರಸಿಂಹ ಶೆಟ್ಟಿಗಾರ್ ಹತ್ಯೆ ಪ್ರಕರಣ ಹಾಗೂ ಪೆÇಳಲಿ ಅನಂತ ಹತ್ಯೆ ಪ್ರಕರಣಗಳಲ್ಲಿ ಆರೋಪಿಯು ನ್ಯಾಯಾಲಯದಿಂದ ಖುಲಾಸೆಗೊಂಡಿದ್ದಾನೆ. 

ನ್ಯಾಯಾಲಯವು ವಾರಂಟ್ ಹಾಗೂ ಘೋಷಣಾ ಆದೇಶ ಹೊರಡಿಸಿದ್ದರೂ, ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಸಂಬಂಧ ಆರೋಪಿಯ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು Rating: 5 Reviewed By: karavali Times
Scroll to Top