ಮಂಗಳೂರು, ಜುಲೈ 07, 2026 (ಕರಾವಳಿ ಟೈಮ್ಸ್) : ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆಯನ್ನು ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪೆÇ್ಲೀಮಾಗಳನ್ನು 2023, 2024, 2025 ಅಥವಾ 2026ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾಸಿಂಧು ಪೆÇೀರ್ಟಲ್ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ತಿಂಗಳು 25ನೇ ತಾರೀಖಿನೊಳಗೆ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಜುಲೈ 2026ರ ತಿಂಗಳ ಸ್ವಯಂ ದೃಢೀಕರಣ ಮಾಡಿಕೊಳ್ಳದಿರುವ ಫಲಾನುಭವಿಗಳಿಗೆ 25 ಜುಲೈ 2026 ರವರೆಗೆ ಅವಕಾಶವಿದೆ.
ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು ಸೇವಾಸಿಂಧು ವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.















0 comments:
Post a Comment