ಕೈಲಾರ್ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗಾಯ - Karavali Times ಕೈಲಾರ್ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗಾಯ - Karavali Times

728x90

13 July 2026

ಕೈಲಾರ್ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗಾಯ

ಬಂಟ್ವಾಳ, ಜುಲೈ 13, 2026 (ಕರಾವಳಿ ಟೈಮ್ಸ್) : ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ-ಕೈಲಾರ್ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಮುನಿಝಾ ಎಂಬವರು ಗಾಯಗೊಂಡ ಘಟನೆ ಜುಲೈ 11 ರಂದು ಸಂಭವಿಸಿದೆ. 

ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡ ಮುನೀಝಾ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು-ಪಡೀಲ್ ಜನಪ್ರಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಮಧ್ವ ನಿವಾಸಿ ಎಂ ಅಶ್ರಫ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕೈಲಾರ್ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗಾಯ Rating: 5 Reviewed By: karavali Times
Scroll to Top