ಮಂಗಳೂರು, ಜುಲೈ 27 2026 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 31 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ. ಸೇವಾಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ನಿಗದಿಪಡಿಸಿದ ದಿನಾಂಕದಂದು ಸಲ್ಲಿಸಬೇಕು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಇ-ಮೇಲ್ ಮೂಲಕ ತಿಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ಹಾಗೂ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











0 comments:
Post a Comment