ಮಂಗಳೂರು, ಜುಲೈ 29 2026 (ಕರಾವಳಿ ಟೈಮ್ಸ್) : 2026ನೇ ಸಾಲಿನಲ್ಲಿ ಮಂಗಳೂರು ಪೊಲೀಸರು ಇದುವರೆಗೆ 87 ಎನ್.ಡಿ.ಪಿ.ಎಸ್. ಪ್ರಕರಣಗಳನ್ನು ದಾಖಲಿಸಿ 157 ಪೆಡ್ಲರ್ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಗಳಲ್ಲಿ 8,18,30,130/- ರೂಪಾಯಿ ಮೌಲ್ಯದ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ 165 ಗ್ರಾಂ ಎಂ.ಡಿ.ಎಂ.ಎ., 1 ಕೆಜಿ 705 ಗ್ರಾಂ ಹೈಡ್ರೋ ವೀಡ್ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ವ್ಯಕ್ತಿಗಳ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.
ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ನಗರದ ಮುಲ್ಕಿಯ ಕೊಲ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ರಾಮ್ಕಿ ಎನರ್ಜಿ ಆಂಡ್ ಎನ್ ವಿರನ್ ಮೆಂಟ್ ಲಿಮಿಟೆಡ್ (ರಿ ಸಸ್ಟೈನಾಬಿಲಿಟಿ ಹೆಲ್ತ್ ಕೇರ್ ಸೊಲ್ಯುಷನ್ ಲಿಮಿಟೆಡ್) ಸಂಸ್ಥೆಯಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ವೈಜ್ಞಾನಿಕ ಹಾಗೂ ಪರಿಸರಸ್ನೇಹಿ ವಿಧಾನದಲ್ಲಿ ಮಾದಕ ವಸ್ತು ನಾಶಪಡಿಸುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮಂಗಳೂರು ನಗರ ಪೆÇಲೀಸ್ ವ್ಯಾಪ್ತಿಯ 16 ಪೆÇಲೀಸ್ ಠಾಣೆಗಳ 59 ಎನ್.ಡಿ.ಪಿ.ಎಸ್. ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಸಮಿತಿಯ ಸಮಕ್ಷಮ ನಾಶಪಡಿಸಲಾಯಿತು.
ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ 450 ಕೆ.ಜಿ ಗಾಂಜಾ, 43 ಕೆ.ಜಿ. 260 ಗ್ರಾಂ ಎಂ.ಡಿ.ಎಂ.ಎ., 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ, 1 ಕೆ.ಜಿ. 200 ಗ್ರಾಂ ಭಾಂಗ್ ಸಹಿತ ಒಟ್ಟಾರೆ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ನಾಶಪಡಿಸಿ ವಿಲೇವಾರಿ ಮಾಡಲಾಯಿತು.
ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ ಪ್ರಮುಖವಾಗಿ 2024ನೇ ಸಾಲಿನಲ್ಲಿ ಮಂಗಳೂರು ಪೂರ್ವ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸುಮಾರು 75 ಕೋಟಿ ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ., 2025ನೇ ಸಾಲಿನಲ್ಲಿ ಮುಲ್ಕಿ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಅಂದಾಜು 4.47 ಕೋಟಿ ಮೌಲ್ಯದ ಸುಮಾರು 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಪೆÇಲೀಸ್ ಠಾಣೆಯ ಸುಮಾರು 20 ಲಕ್ಷ ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಪೆÇಲೀಸ್ ಠಾಣೆಯ ಸುಮಾರು 36 ಲಕ್ಷ ಮೌಲ್ಯದ 111 ಕೆ.ಜಿ. ಗಾಂಜಾ ಸೇರಿವೆ.
ಸಾರ್ವಜನಿಕರು ಮಾದಕ ವಸ್ತುಗಳಿಗೆ ಸಂಬಂದಿಸಿದ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಪೆÇಲೀಸ್ ಇಲಾಖೆಯಿಂದ ಸೃಜನೆ ಮಾಡಲಾಗಿರುವ ಕ್ಯೂಅರ್ ಕೋಡ್ ಮೂಲಕ ಅಥವಾ ಪೆÇಲೀಸ್ ಕಂಟ್ರೋಲ್ ರೂಮ್ 112/ 9480802321 ಸಂಖ್ಯೆಗೆ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.













0 comments:
Post a Comment