ಬಂಟ್ವಾಳ, ಜುಲೈ 31, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಕ್ಷೇತ್ರದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಯು ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಆಗಸ್ಟ್ 7 ಮತ್ತು 8ರಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ಸಿನಲ್ಲಿ ನಡೆಯಲಿರುವ ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಕಾರ್ಯಾಗಾರವು ಜುಲೈ 31 ರಂದು ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.
ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಶಿಕ್ಷಣದ ಜೊತೆಗೆ ಉದ್ಯೋಗವೂ ಯುವಜನರ ಬದುಕಿನಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗ ಪಡೆಯುವ ಅವಕಾಶ ದೊರಕಬೇಕೆಂಬ ಉದ್ದೇಶದಿಂದ ಈ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.
ಆಳ್ವಾಸ್ ಸಂಸ್ಥೆ ಕಳೆದ ಸುಮಾರು ಎರಡು ದಶಕಗಳಿಂದ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಸಾವಿರಾರು ಯುವಕರಿಗೆ ಉದ್ಯೋಗ ದೊರಕುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಬಾರಿಯ ಉದ್ಯೋಗ ಮೇಳದಲ್ಲಿ ಈಗಾಗಲೇ 350ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ನೋಂದಾಯಿಸಿಕೊಂಡಿದ್ದು, ಎಸ್ಸೆಸ್ಸೆಲ್ಸಿ ಉತ್ತೀರ್ಣರಿಂದ ಹಿಡಿದು ಪದವೀಧರರವರೆಗಿನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದವರು ತಿಳಿಸಿದರು.
ಮೂಡಬಿದಿರೆ ಆಳ್ವಾಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪನಾ ಸಮಿತಿ ಟ್ರಸ್ಟಿ ವಿವೇಕ್ ಅಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ರೆಸ್ಯೂಮ್ ಸಿದ್ಧಪಡಿಸುವ ವಿಧಾನ, ಸಂದರ್ಶನಕ್ಕೆ ಅಗತ್ಯ ದಾಖಲೆಗಳು, ವಿವಿಧ ಕಂಪೆನಿಗಳ ಮಾಹಿತಿ, ನೋಂದಣಿ ಪ್ರಕ್ರಿಯೆ ಹಾಗೂ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಕಾಲೇಜು ಉಪನ್ಯಾಸಕ ಯೋಗೀಶ್ ಕೈರೋಡಿ ಸ್ವಾಗತಿಸಿ, ಬುಡಾ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ವಂದಿಸಿದರು. ಈ ಸಂದರ್ಭ ಪ್ರಮುಖರಾದ ಸುದರ್ಶನ್ ಬಜ, ಶಿವಪ್ರಸಾದ್ ಕರೋಪಾಡಿ, ರಾಮದಾಸ್ ಬಂಟ್ವಾಳ, ಅಜಿತ್ ಶೆಟ್ಟಿ, ವೆಂಕಟೇಶ್ ಭಟ್, ಚಂದ್ರಶೇಖರ ಬಂಗೇರ, ಸುಲೋಚನಾ ಜಿ ಕೆ ಭಟ್, ದಿನೇಶ್ ದಂಬೆದಾರ್, ಶ್ಯಾಮಪ್ರಸಾದ್ ಪೂಂಜಾ, ಚಂದ್ರಶೇಖರ ಶೆಟ್ಟಿ, ನಂದರಾಮ ರೈ, ಗಣೇಶ್ ರೈ ಮಾಣಿ, ಕಾರ್ತಿಕ್ ಬಳ್ಳಾಲ್, ಸಂತೋಷ್ ರೈ, ರಶ್ಮಿತ್ ಶೆಟ್ಟಿ ಸಹಿತ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
















0 comments:
Post a Comment