ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ಸ್ಥಳಕ್ಕೆ ವಿಟ್ಲ ಪೊಲೀಸರ ದಾಳಿ, ವಾಹನ, ಯಂತ್ರಗಳು ವಶಕ್ಕೆ - Karavali Times ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ಸ್ಥಳಕ್ಕೆ ವಿಟ್ಲ ಪೊಲೀಸರ ದಾಳಿ, ವಾಹನ, ಯಂತ್ರಗಳು ವಶಕ್ಕೆ - Karavali Times

728x90

4 July 2026

ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ಸ್ಥಳಕ್ಕೆ ವಿಟ್ಲ ಪೊಲೀಸರ ದಾಳಿ, ವಾಹನ, ಯಂತ್ರಗಳು ವಶಕ್ಕೆ

ಬಂಟ್ವಾಳ, ಜುಲೈ 04, 2026 (ಕರಾವಳಿ ಟೈಮ್ಸ್) : ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಜುಲೈ 2 ರಂದು ನಡೆದಿದೆ. 

ವಿಟ್ಲ ಠಾಣಾ ಪಿಎಸ್ಸೈ ರಾಮಕೃಷ್ಣ ಅವರಿಗೆ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳವಾದ ಬಂಟ್ವಾಳ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ತಲುಪಿದಾಗ, ಪೆÇಲೀಸ್ ಇಲಾಖಾ ವಾಹನವನ್ನು ನೋಡಿ ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಓಡಿಹೋಗಿರುತ್ತಾರೆ. ಸದ್ರಿ ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದಿದ್ದು, ಕೃತ್ಯಕ್ಕೆ ಬಳಸಿದ ಯಂತ್ರೋಪಕರಣಗಳು ಸ್ಥಳದಲ್ಲಿ ಕಂಡು ಬಂದಿದೆ. ಸದ್ರಿ ಸ್ಥಳದ ಸಮೀಪದಲ್ಲೇ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುತ್ತಿರುವುದು ಹಾಗೂ ಸದ್ರಿ ಮಣ್ಣು ಗಣಿಗಾರಿಕೆಯ ಮಣ್ಣನ್ನು ತುಂಬಿಸಿಕೊಂಡು ಹೋಗುವ ಲಾರಿಗಳ ತೂಕ ಮಾಡಲು ವೇ ಬ್ರಿಡ್ಜ್ ಮತ್ತು ಕಟ್ಟಡ ಮಾಡಿರುವುದು ಹಾಗೂ ಯಂತ್ರೋಪಕರಣಗಳು ಪತ್ತೆಯಾಗಿರುತ್ತದೆ. ಸದ್ರಿ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿ, ಯಾವುದೇ ಪರವಾನಗಿ ಇಲ್ಲದೇ ಗಣಿಗಾರಿಕೆ ಮಾಡುತ್ತಿದ್ದ ಆರೋಪಿ ಮುಳಿಗದ್ದೆ ಝಕಾರಿಯಾ ಮತ್ತು ಇತರರ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ಸ್ಥಳಕ್ಕೆ ವಿಟ್ಲ ಪೊಲೀಸರ ದಾಳಿ, ವಾಹನ, ಯಂತ್ರಗಳು ವಶಕ್ಕೆ Rating: 5 Reviewed By: karavali Times
Scroll to Top