ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಪ್ರಕರಣ ಬೇಧಿಸಿದ ಅಬಕಾರಿ ಅಧಿಕಾರಿಗಳು - Karavali Times ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಪ್ರಕರಣ ಬೇಧಿಸಿದ ಅಬಕಾರಿ ಅಧಿಕಾರಿಗಳು - Karavali Times

728x90

24 August 2026

ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಪ್ರಕರಣ ಬೇಧಿಸಿದ ಅಬಕಾರಿ ಅಧಿಕಾರಿಗಳು

ಮಂಗಳೂರು, ಆಗಸ್ಟ್ 24, 2026 (ಕರಾವಳಿ ಟೈಮ್ಸ್) : ಗೋವಾದಿಂದ ಮಂಗಳೂರು ಉಡುಪಿ ಮೂಲಕ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಜಾಲ ಬೇಧಿಸಿದ ಅಬಕಾರಿ ಅಧಿಕಾರಿಗಳು ಮದ್ಯ ಸಹಿತ ಇಬ್ಬರನ್ನು ದಸ್ತಗಿರಿ ಮಾಡಿದ್ದಾರೆ. 

ಕಾರ್ಯಾಚರಣೆ ವೇಳೆ ಅಬಕಾರಿ ಅಧಿಕಾರಿಗಳ ತಂಡ ವಾಹನ ಮಾಲಕ ಹಾಗೂ ಚಾಲಕ ಬಸವರಾಜು ಬೋವಿ ಹಾಗೂ ನಾಗವೇಣಿ ನಾಯಕ ಎಂಬವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ. 

ಆಗಸ್ಟ್ 22 ರಂದು ಮಂಗಳೂರು ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ ಎಚ್ ಅವರ ಆದೇಶದ ಮೇರೆಗೆ  ದಕ್ಷಿಣ ಕನ್ನಡ  ಅಬಕಾರಿ ಉಪ ಆಯುಕ್ತೆ ಶ್ರೀಮತಿ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಅಬಕಾರಿ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದೆ. 

ದಾಳಿ ವೇಳೆ ಆರೋಪಿಗಳ ಸಹಿತ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಅದರಲ್ಲಿದ್ದ 438 ಲೀಟರ್ ಅಕ್ರಮ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದಾಳಿ ನಡೆಸಿದ ವಿಶೇಷ ತಂಡದಲ್ಲಿ ಮಂಗಳೂರು ಉಪವಿಭಾಗದ ಉಪ ಅಧೀಕ್ಷಕಿ ಗಾಯತ್ರಿ ಸಿ ಎಚ್, ಬಂಟ್ವಾಳ ಉಪವಿಭಾಗ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ ತಾಲೂಕು ವಲಯ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ, ತಲಪಾಡಿ ಚೆಕ್ ಪೆÇೀಸ್ಟ್ ನಿರೀಕ್ಷಕ ದತ್ತಗುರು ಅಥೆಣಿ, ಉಪ ನಿರೀಕ್ಷಕ ಜಯಪ್ಪ, ಶಿವಶಂಕರ್, ಅಭಿಷೇಕ್ ಹಾಗೂ ಪೇದೆ ಪ್ರಕಾಶ್ ಅವರು ಪಾಲ್ಗೊಂಡಿದ್ದರು. ಜಂಟಿ ಆಯುಕ್ತರ ಕಚೇರಿ ನಿರೀಕ್ಷಕಿ ಸುನಿತಾ ಅವರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಪ್ರಕರಣ ಬೇಧಿಸಿದ ಅಬಕಾರಿ ಅಧಿಕಾರಿಗಳು Rating: 5 Reviewed By: karavali Times
Scroll to Top