ಕಲ್ಲಡ್ಕ ಫ್ಲೈ ಓವರ್ ಮೇಲೆ ಸ್ಕೂಟರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರರಿಬ್ಬರಿಗೆ ಗಾಯ - Karavali Times ಕಲ್ಲಡ್ಕ ಫ್ಲೈ ಓವರ್ ಮೇಲೆ ಸ್ಕೂಟರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರರಿಬ್ಬರಿಗೆ ಗಾಯ - Karavali Times

728x90

19 August 2026

ಕಲ್ಲಡ್ಕ ಫ್ಲೈ ಓವರ್ ಮೇಲೆ ಸ್ಕೂಟರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರರಿಬ್ಬರಿಗೆ ಗಾಯ

ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಕಲ್ಲಡ್ಕ ಎಂಬಲ್ಲಿ ಫ್ಲೈ ಓವರ್ ಮೇಲೆ ಆಕ್ಟಿವಾ ಸ್ಕೂಟರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ದ್ವಿಚಕ್ರ ವಾಹನ ಸವಾರರು ಗಾಯಗೊಂಡ ಘಟನೆ ಆಗಸ್ಟ್ 17 ರಂದು ಸಂಭವಿಸಿದೆ. 

ಗಾಯಗೊಂಡ ಸ್ಕೂಟರ್ ಸವಾರನನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ನಿವಾಸಿ ಕೊರಗಪ್ಪ ಹಾಗೂ ಬೈಕ್ ಸವಾರ ತೀರ್ತೇಶ್ ಎಂದು ಹೆಸರಿಸಲಾಗಿದೆ. 

ಕೊರಗಪ್ಪ ಅವರು ಆಗಸ್ಟ್ 17 ರಂದು ನಾಗರ ಪಂಚಮಿ ಪ್ರಯುಕ್ತ ಸಜಿಪದ ಪೆಲತ್ತಕಟ್ಟೆ ಎಂಬಲ್ಲಿಗೆ ಸ್ಕೂಟರಿನಲ್ಲಿ ಬಂದು ವಾಪಾಸು ಮನೆ ಕಡೆಗೆ ತೆರಳುತ್ತಿದ್ದ ವೇಳೆ ಮಧ್ಯಾಹ್ನ 2.30ರ ವೇಳೆಗೆ ಕಲ್ಲಡ್ಕ ಫ್ಲೈ ಓವರ್ ಮೇಲೆ ಹಿಂದಿನಿಂದ ಬಿ ಸಿ ರೋಡು ಕಡೆಯಿಂದ ತೀರ್ತೇಶ್ ಅವರು ಸವಾರಿ ಮಾಡಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಕೊರಗಪ್ಪ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಕಲ್ಲಡ್ಕ ಪುಷ್ಪರಾಜ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಪಡಿಸಿದ ಬೈಕ್ ಸವಾರ ತೀರ್ತೆಶ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಗಾಯಾಳು ಕೊರಗಪ್ಪ ಅವರ ಪುತ್ರ ನೀಡಿರುವ ದೂರಿನಂತೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಲ್ಲಡ್ಕ ಫ್ಲೈ ಓವರ್ ಮೇಲೆ ಸ್ಕೂಟರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರರಿಬ್ಬರಿಗೆ ಗಾಯ Rating: 5 Reviewed By: karavali Times
Scroll to Top