ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಅಟೋ ರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಬಾಲಕಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಬರ್ನ ಎಂಬಲ್ಲಿ ಆಗಸ್ಟ್ 15 ರಂದು ಸಂಭವಿಸಿದೆ.
ಗಾಯಗೊಂಡ ಬಾಲಕನನ್ನು ಕ್ಷಿತಿಜ್ (14) ಎಂದು ಹೆಸರಿಸಲಾಗಿದೆ. ಈತ ಜಗನ್ನಾಥ ಶೆಟ್ಟಿ ಎಂಬವರ ಅಟೋ ರಿಕ್ಷಾದಲ್ಲಿ ಬಂದು ಬರ್ನ ಎಂಬಲ್ಲಿ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಸಹಸವಾರನನ್ನು ಕುಳ್ಳಿರಿಸಿ ಅಪ್ರಾಪ್ತ ಬಾಲಕ ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆ ಬಿದ್ದ ಕ್ಷಿತಿಜ್ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಆತನನ್ನು ತಕ್ಷಣ ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಅಟೋ ಚಾಲಕ ಜಗನ್ನಾಥ ಶೆಟ್ಟಿ ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment