ಬಂಟ್ವಾಳ, ಆಗಸ್ಟ್ 07, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭೆಯಲ್ಲಿ ನಾಲ್ಕೈದು ವರ್ಷಗಳಿಂದ ಬಳಕೆಯಾಗದೆ ಪಾಳು ಬಿದ್ದಿದ್ದ ಹಿಟಾಚಿ ವಾಹನವನ್ನು ಇತ್ತೀಚೆಗೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ದುರಸ್ತಿಗೆ ಕ್ರಮ ಕೈಗೊಂಡಿದ್ದು, ಕಂಚಿನಡ್ಕಪದವಿನಲ್ಲಿರುವ ಬಂಟ್ವಾಳ ಪುರಸಭೆಯ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ವಿಂಗಡನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಈ ಸಂದರ್ಭ ಮಾತನಾಡಿರುವ ಮುಖ್ಯಾಧಿಕಾರಿಗಳು, ಮುಂದಿನ ದಿನಗಳಲ್ಲಿ ಕಂಚಿನಡ್ಕಪದವಿನಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಂಗಡನೆ ಮಾಡಲಾಗುವುದು. ಹೊರಗುತ್ತಿಗೆ ಆಧಾರದಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿಕೊಂಡು ಎಲ್ಲವನ್ನೂ ವೈಜ್ಞಾನಿಕವಾಗಿ ಮಾಡಲಾಗುವುದು ಎಂದವರು ಹೇಳಿದ್ದಾರೆ. ಮಳೆಗಾಲವಾಗಿರುವುದರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗಿದ್ದು, ಇಲ್ಲಿನ ಎಂ ಆರ್ ಎಫ್ ಘಟಕ ಹಾಗೂ ಎರೆಹುಳ ಘಟಕವನ್ನೂ ಚಾಲನೆಗೊಳಿಸಲಾಗುವುದು ಎಂದು ತೀರ್ಥಪ್ರಸಾದ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.











0 comments:
Post a Comment