ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ - Karavali Times ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ - Karavali Times

728x90

21 August 2026

ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

 ಮಂಗಳೂರು, ಆಗಸ್ಟ್ 21, 2026 (ಕರಾವಳಿ ಟೈಮ್ಸ್) : ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ 2020 ರಲ್ಲಿ ದಾಖಲಾಗಿದ್ದ  ಪೋಕ್ಸೋ ಪ್ರಕರಣದ ಆರೋಪಿಗೆ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪಿತ್ತಿದೆ. ಶಿಕ್ಷೆಗೊಳಗಾದ ಅಪರಾಧಿಯನ್ನು ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಎಂದು ಹೆಸರಿಸಲಾಗಿದೆ.

ಅಬ್ದುಲ್ಲಾ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 12/2020 ಕಲಂ 354(ಎ1), 506 ಐಪಿಸಿ ಹಾಗೂ ಕಲಂ 8 ಪೋಕ್ಸೋ ಕಾಯ್ದೆ-2012 ರಂತೆ ಪ್ರಕರಣದಲ್ಲಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿ ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ವಾಸ ಮತ್ತು 35 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ 6 ತಿಂಗಳ ಸಾಧಾ ಕಾರಾಗೃಹ ಶಿಕ್ಷೆ ವಿಧಿಸಿ ಅದೇಶಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅವರು ವಾದ ಮಂಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ Rating: 5 Reviewed By: karavali Times
Scroll to Top