ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಗಳು ಸಾಬೀತಾದ ಹಿನ್ನಲೆಯಲ್ಲಿ ನ್ಯಾಯಾಲಯ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ವಾಸ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪಿತ್ತಿದೆ.
ಶಿಕ್ಷೆಗೊಳಗಾದ ಆರೋಪಿಯನ್ನು ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂದು ಹೆಸರಿಸಲಾಗಿದೆ. 2015ರ ಜುಲೈ 23 ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ಧ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 315/2015, ಕಲಂ 153(ಎ)295(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪಿಎಸ್ಸೈ ಹಾಗೂ ಪ್ರಕರಣದ ತನಿಖಾಧಿಕಾರಿ ರವಿ ಬಿ ಎಸ್ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪ್ರಿನ್ಸಿಪಲ್ ಸಿ ಜೆ ಆಂಡ್ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ 153(ಎ) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಅದೇಶಿಸಿದ್ದಾರೆ. ಸರಕಾರಿ ಅಭಿಯೋಜಕಿ ಶ್ರೀಮತಿ ಆಶೀತ ಅವರು ವಾದ ಮಂಡಿಸಿದ್ದಾರೆ.











0 comments:
Post a Comment