ಪುತ್ತೂರು, ಆಗಸ್ಟ್ 23, 2026 (ಕರಾವಳಿ ಟೈಮ್ಸ್) : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು ವಾಹನ, ಜಾನುವಾರು ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ಆಗಸ್ಟ್ 23 ಎಂದು ಬೆಳಿಗ್ಗೆ ನಡೆದಿದೆ.
ಆಗಸ್ಟ್ 23 ರಂದು ಬೆಳಿಗ್ಗೆ, ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಪುತ್ತೂರು ನಗರ ಠಾಣಾ ಪಿಎಸ್ಸೈ ಸುರೇಶ್ ಸಿ ಟಿ ಅವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ಕೆಎ19 ಡಿ 0948 ನೋಂದಣಿ ಸಂಖ್ಯೆಯ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿದೆ. ಪಿಕಪ್ ವಾಹನ ಚಾಲಕ ಮಹಮ್ಮದ್ ಜಬ್ಬಾರ್ ಎಂಬಾತನಲ್ಲಿ ವಿಚಾರಿಸಿದಾಗ ಸದ್ರಿ ಜಾನುವಾರುಗಳನ್ನು ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಖರೀದಿಸಿ ಯಾವುದೇ ಪರವಾನಿಗೆ ಇಲ್ಲದೇ ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ಜಾನುವಾರು ಸಹಿತ ವಾಹನವನ್ನು ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.











0 comments:
Post a Comment