ವಾಹನ ಡಿಕ್ಕಿ ಪಡಿಸಿ ವ್ಯಕ್ತಿಯನ್ನು ಕೊಲ್ಲಲು ಯತ್ನಿಸಿದ್ದ ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು - Karavali Times ವಾಹನ ಡಿಕ್ಕಿ ಪಡಿಸಿ ವ್ಯಕ್ತಿಯನ್ನು ಕೊಲ್ಲಲು ಯತ್ನಿಸಿದ್ದ ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು - Karavali Times

728x90

23 August 2026

ವಾಹನ ಡಿಕ್ಕಿ ಪಡಿಸಿ ವ್ಯಕ್ತಿಯನ್ನು ಕೊಲ್ಲಲು ಯತ್ನಿಸಿದ್ದ ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು

ಧರ್ಮಸ್ಥಳ, ಆಗಸ್ಟ್ 23, 2026 (ಕರಾವಳಿ ಟೈಮ್ಸ್) : ವ್ಯಕ್ತಿಯೋರ್ವರನ್ನು ವಾಹನ ಡಿಕ್ಕಿಪಡಿಸಿ ಕೊಲ್ಲಲು ಯತ್ನಿಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಧರ್ಮಸ್ಥಳ ನಿವಾಸಿ ಶರತ್ (33) ಎಂದು ಹೆಸರಿಸಲಾಗಿದೆ. ಈತ ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಎಂಬವರನ್ನು ವಾಹನ ಡಿಕ್ಕಿ ಪಡಿಸಿ ಕೊಲ್ಲುವುದಾಗಿ ಕೆಲವು ತಿಂಗಳುಗಳ ಹಿಂದೆ ಬೆದರಿಸಿರುತ್ತಾರೆ. ಬಳಿಕ ಜುಲೈ 30 ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿ ತನ್ನ ದ್ವಿಚಕ್ರ ವಾಹನದಲ್ಲಿ  ಮನೆಗೆ ಹೋಗುತ್ತಿದ್ದಾಗ, ಆರೋಪಿಯು ಕೊಲ್ಲುವ ಉದ್ದೇಶದಿಂದ ಕೆಎ 05 ಎಡಿ 6341 ನೋಂದಣಿ ಸಂಖ್ಯೆಯ ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಧರ್ಮಸ್ಥಳ ಗ್ರಾಮ ಕುರುಮಾನಿ ಕ್ರಾಸ್ ಬಳಿ ಡಿಕ್ಕಿಪಡಿಸಿರುತ್ತಾನೆ. ಅಪಘಾತದ ಪರಿಣಾಮ ಬಾಲಕೃಷ್ಣ ಅವರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆದಿರುತ್ತಾರೆ. ಈ ಬಗ್ಗೆ ಬಾಲಕೃಷ್ಣ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 52/2026, ಕಲಂ 109 ಬಿ ಎನ್ ಎಸ್-2023 ಪ್ರಕಾರ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ತ£ಖೆ ನಡೆಸಿದ ಧರ್ಮಸ್ಥಳ ಠಾಣಾ ಪೆÇಲೀಸರು ಆರೋಪಿ ಶರತ್ ಎಂಬಾತನನ್ನು ಆಗಸ್ಟ್ 22 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ವಾಹನ ಡಿಕ್ಕಿ ಪಡಿಸಿ ವ್ಯಕ್ತಿಯನ್ನು ಕೊಲ್ಲಲು ಯತ್ನಿಸಿದ್ದ ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು Rating: 5 Reviewed By: karavali Times
Scroll to Top