ಪುತ್ತೂರು, ಆಗಸ್ಟ್ 23, 2026 (ಕರಾವಳಿ ಟೈಮ್ಸ್) : ಪುತ್ತೂರು ದರ್ಬೆಯ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ, ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ಮೂಲಕ ಧಾರ್ಮಿಕ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡುವ ಮೂಲಕ, ಬಂದ್ ಗೆ ಕರೆಕೊಟ್ಟು, ಜನರು ಅಕ್ರಮ ಕೂಟ ಸೇರಿ ಕಾನೂನು ಬಾಹಿರ ಕೃತ್ಯವೆಸಗಲು ದುಷ್ಪ್ರೇರಣೆ ನೀಡಿರುವುದು ಕಂಡು ಬಂದಿದ್ದು, ಸದ್ರಿ ಸಂದೇಶವನ್ನು ಪ್ರಸಾರ ಮಾಡಿದ ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 100/2026, ಕಲಂ 353(2), 57, 189 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅದೇ ರೀತಿ ಪುತ್ತೂರು ದರ್ಬೆಯಲ್ಲಿ ಆಗಸ್ಟ್ 21 ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ, “ಸಂಜೀವ ಮಠಂದೂರು” ಎಂಬ ಫೇಸ್ ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕ ವಲಯದಲ್ಲಿ ಭಯವನ್ನುಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡುವ ಮೂಲಕ, ಬಂದ್ ಗೆ ಕರೆಕೊಟ್ಟು, ಜನರು ಅಕ್ರಮಕೂಟ ಸೇರಿ ಕಾನೂನು ಬಾಹಿರ ಕೃತ್ಯವೆಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದ್ದು, ಸದ್ರಿ ಸಂದೇಶವನ್ನು ಪ್ರಸಾರ ಮಾಡಿದ “ಸಂಜೀವ ಮಠಂದೂರು” ಎಂಬ ಫೇಸ್ ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 102/2026, ಕಲಂ 353(2), 57, 189 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.
ಪ್ರತಿಯೊಬ್ಬರೂ ಪ್ರತಿಭಟನೆ ನಡೆಸುವ ಹಕ್ಕನ್ನು ಹೊಂದಿದ್ದು, ಪೆÇಲೀಸ್ ಇಲಾಖೆಯಿಂದ ಅನುಮತಿಯನ್ನು ನೀಡಲಾಗುವುದು. ಆದರೆ ಪ್ರತಿಭಟನೆಯ ದಿನಾಂಕ ಮತ್ತು ಸಮಯವನ್ನು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆಯಾಗುವಂತಹ ಯಾವುದೇ ಅನ್ಯ ಉದ್ದೇಶದಿಂದ ನಿಗದಿಪಡಿಸಿರುವುದು ಕಂಡುಬಂದಲ್ಲಿ, ಅಂತಹವರುಗಳ ವಿರುದ್ದ ಪೆÇಲೀಸ್ ಇಲಾಖೆಯು ಸೂಕ್ತ ಕಾನೂನು ಕ್ರಮ ಜರುಗಿಸಲಿದೆ ಎಂದು ಇದೇ ವೇಳೆ ಎಸ್ಪಿ ಎಚ್ಚರಿಕೆಯನ್ನೂ ನೀಡಿದ್ದಾರೆ.











0 comments:
Post a Comment