ಪುತ್ತೂರು, ಆಗಸ್ಟ್ 25, 2026 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣವಾದ ವಾಟ್ಸಪ್ ಮೂಲಕ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಾಟ್ಸಪ್ ಮೂಲಕ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ, ಆಗಸ್ಟ್ 26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸುಳ್ಳು ಸುದ್ದಿ ಪ್ರಸಾರ ಮಾಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸದ್ರಿ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 103/2026, ಕಲಂ 353(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
25 August 2026
- Blogger Comments
- Facebook Comments
Subscribe to:
Post Comments (Atom)




















0 comments:
Post a Comment