ಬೆಂಗಳೂರು, ಆಗಸ್ಟ್ 03, 2026 (ಕರಾವಳಿ ಟೈಮ್ಸ್) : ಕೊನೆಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯಾಗಿದೆ. 19 ಶಾಸಕರು ಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಸಚಿವರಾಗಿ ಆಗಸ್ಟ್ 3 ರಂದು ಸಂಜೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ. ಬಾಲಕೃಷ್ಣ, ಕೆ.ಎಸ್. ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್. ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಬಿ. ನಾಗೇಂದ್ರ, ಪಿ.ಎಂ. ನರೇಂದ್ರಸ್ವಾಮಿ, ಸಿ. ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್ ಹಾಗೂ ಝಮೀರ್ ಅಹ್ಮದ್ ಖಾನ್ ಅವರುಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
19 ಸಚಿವರು ಪಶ್ಚಿಮಕ್ಕೆ ಅಭಿಮುಖವಾಗಿ £ಂತು ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ ಡಿಕೆಶಿ ಮತ್ತು 13 ಸಚಿವರು ಪೂರ್ವಕ್ಕೆ ಅಭಿಮುಖವಾಗಿ ನಿಂತು ಪ್ರಮಾಣ ವಚನ ಸ್ವೀಕರಿಸಿದ್ದರು. ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.
ಗಾಯತ್ರಿ ಶಾಂತೇಗೌಡಗೆ ಕೊಕ್
ಇದಕ್ಕೂ ಮುನ್ನ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಸಿಎಂ ಶಿವಕುಮಾರ್ ಅವರಿಗೆ ಪತ್ರ ಬರೆದು, ಸಂಪುಟಕ್ಕೆ ಸೇರಿಸಿಕೊಳ್ಳಲು 20 ಸಚಿವರ ಹೆಸರುಗಳನ್ನು ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿರುವ ಬಗ್ಗೆ ಮಾಹಿತಿ ನೀಡಿದ್ದರು.
ಆದಾಗ್ಯೂ, ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದ ಅಂತಿಮ ಪಟ್ಟಿಯಲ್ಲಿದ್ದ ಗಾಯತ್ರಿ ಶಾಂತೇಗೌಡ ಅವರು ಪ್ರಮಾಣವಚನ ಸ್ವೀಕರಿಸಲಿಲ್ಲ. ಇದರೊಂದಿಗೆ ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಇಲ್ಲದಂತಾಗಿದೆ. ಕೊನೇ ಕ್ಷಣದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಹಿಳಾ ಶಾಸಕರ ನಡುವಿನ ತೀವ್ರ ಪೈಪೆÇೀಟಿಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
20 ಮಂದಿ ನೂತನ ಸಚಿವರ ಪಟ್ಟಿಯಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರಿತ್ತು. ಆದರೆ ಪ್ರಮಾಣ ವಚನ ಸ್ವೀಕರಿಸಲು ಸಿಎಂ ಕಡೆಯಿಂದ ಅವರಿಗೆ ಯಾವುದೇ ಕರೆ ಬಂದಿಲ್ಲ. ಪರಿಷತ್ ಸದಸ್ಯೆಯಾಗಿ ಗಾಯತ್ರಿ ಇನ್ನೂ ಪ್ರಮಾಣ ಸ್ವೀಕರಿಸಿದ ಕಾರಣ ಪಕ್ಷದಲ್ಲಿ ಈ ಬಗ್ಗೆ ಅಸಮಾಧಾನ ಭುಗಿಲೆದ್ದ ಕಾರಣ, ಪಕ್ಷ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗುತ್ತಿದೆ.
ಮಹಿಳಾ ಸಚಿವ ಸ್ಥಾನಕ್ಕೆ ಗಾಯತ್ರಿ ಅವರ ಹೆಸರು ಘೋಷಣೆ ನಡುವೆಯೂ ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ನಡುವೆ ತೀವ್ರ ಪೈಪೆÇೀಟಿ ನಡೆದಿದೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಕೊನೆ ಕ್ಷಣದಲ್ಲಿ ಗಾಯತ್ರಿ ಹೆಸರು ಬಿಡಲೇಬೇಕು ಎಂಬ ರಾಜ್ಯ ನಾಯಕರ ಒತ್ತಡಕ್ಕೆ ಕಾಂಗ್ರೆಸ್ ವರಿಷ್ಠರು ಮಣಿದಿದ್ದಾರೆ.











0 comments:
Post a Comment