ಮಂಗಳೂರು, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಪ್ರಕರಣ ಬೇಧಿಸಿರುವ ಮಂಗಳೂರು ಪೊಲೀಸರು ಎಂಡಿಎಂಎ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.
ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೆÇಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ, ಸುಮಾರು 30-35 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ಣೀಷೇಧಿತ ಮಾದಕ ವಸ್ತುವಾದ ಎಂಡಿಎಂಎ ಹೊಂದಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಮಂಗಳೂರು ಪೂರ್ವ ಪೆÇಲೀಸ್ ಠಾಣೆಯ ಅಧಿಕಾರಿಗಳಿಗೆ ಖಚಿತ ಮಾಹಿತಿ ದೊರೆತ ಮೇರೆಗೆ ಮಂಗಳೂರು ಪೂರ್ವ ಪೆÇಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿ, ಸದರಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಮಂಜೇಶ್ವರ-ವರ್ಕಾಡಿ, ಬಜಲಕಾರಿಯಾ ಪರನೀರ್ ಪಾಡಿ ಮನೆ ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಮೊಹಮ್ಮದ್ ಇರ್ಶಾದ್ (30) ಎಂದು ಹೆಸರಿಸಲಾಗಿದೆ.
ಬಂಧಿತ ಆರೋಪಿಯಿಂದ 1.36 ಲಕ್ಷ ರೂಪಾಯಿ ಮೌಲ್ಯದ 13.69 ಗ್ರಾಂ ತೂಕದ ಎಂಡಿಎಂಎ, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2,94,500/- ಆಗಿದೆ.
ಈ ಕುರಿತು ಮಂಗಳೂರು ಪೂರ್ವ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ, ಕದ್ರಿ ಗ್ರಾಮದ ಪದವು ಮೈದಾನದ ಬಳಿ ಇರುವ ಆಯುರ್ವೇದ ಕ್ಲಿನಿಕಿನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ, ಮೂಲತಃ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ತಾಲೂಕಿನ ಚಿರುಪುಝಾ ಗ್ರಾಮದ ನಿವಾಸಿ, ಪ್ರಸ್ತುತ ಮಂಗಳೂರು-ಕೊಂಚಾಡಿ, ಶಬರಿ ಅಪಾರ್ಟ್ ಮೆಂಟಿನಲ್ಲಿ ವಾಸವಾಗಿರುವ ಕೃಷ್ಣನ್ ಎಂಬವರ ಪುತ್ರ ನಿತಿನ್ ಕೃಷ್ಣನ್ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 17 ರಂದು ಗಾಂಜಾ ಸೇವನೆ ಮಾಡಿದ ಪ್ರಕರಣದಲ್ಲಿ ಆರೋಪಿ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ವಿಚಾರಣೆಗೊಳಪಡಿಸಿದ ಸಂದರ್ಭ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್ ಎಂಬಾತನನ್ನು ತೋರಿಸಿಕೊಡುವುದಾಗಿ ತಿಳಿಸಿದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಆತನ ಬಳಿಯಿಂದ 60 ಸಾವಿರ ರೂಪಾಯಿ ಮೌಲ್ಯದ 1 ಕೆ.ಜಿ. 206 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೆÇೀನ್ ಹಾಗೂ ಕೆ ಎಲ್ 86 2397 ನೋಂದಣಿ ಸಂಖ್ಯೆಯ ಕೆಟಿಎಂ ಬೈಕ್ ಆರೋಪಿಯ ಮೊಬೈಲ್ ಫೆÇೀನ್ ವಶಪಡಿಸಿಕೊಳ್ಳಲಾಗಿದೆ.












0 comments:
Post a Comment