ಬಂಟ್ವಾಳದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ದೇಶದಲ್ಲಿ ಯುವಜನತೆಗೆ ಮತದಾನದ ಹಕ್ಕು ಒದಗಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಉಳುವ ರೈತನಿಗೆ ಭೂಮಿಯ ಒಡೆತನ ನೀಡಿದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ನೆನಪು ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವ್ಯಾಪ್ತಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸ್ ಅವರ ಜನ್ಮದಿನಾಚರಣೆ ಪ್ರಯುಕ್ತ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಆಗಸ್ಟ್ 20 ರಂದು ಹಣ್ಣು ಹಂಪಲು ವಿತರಿಸಿ ಅವರು ಮಾತನಾಡಿದರು.
ಈ ಸಂದರ್ಭ ಬಂಟ್ವಾಳ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ಪಾಣೆಮಂಗಳೂರು ಬ್ಲಾಕ್ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರುಗಳಾದ ಎ ಬಿ ಅಬ್ದುಲ್ಲಾ ಹಾಗೂ ಲಾದ್ರು ಮಿನೇಜಸ್, ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಕ್ಷ ಪ್ರಮುಖರಾದ ಚಂದ್ರಶೇಖರ್ ಭಂಡಾರಿ, ಬಾಲಕೃಷ್ಣ ಅಂಚನ್, ಬಿ ಎಂ ಅಬ್ಬಾಸ್ ಅಲಿ, ಕೆ ಪದ್ಮನಾಭ ರೈ, ಬೇಬಿ ಕುಂದರ್, ಪ್ರವೀಣ್ ರೊಡ್ರಿಗಸ್, ವೆಂಕಪ್ಪ ಪೂಜಾರಿ, ಚಂದ್ರಶೇಖರ್ ರೈ, ಮುಹಮ್ಮದ್ ನಂದಾವರ, ಸಿರಾಜ್ ಮದಕ, ಸಮದ್ ಕೈಕಂಬ, ರಮ್ಲಾನ್ ಅಮುಂಜೆ, ಚಂದ್ರಶೇಖರ ರೈ ಬೋಳಂತೂರು, ಮುಹಮ್ಮದ್ ಮಂಚಿ, ಸಂದೇಶ ಶೆಟ್ಟಿ ವಿಟ್ಲ ಪಡ್ನೂರು ಮೊದಲಾದವರಿದ್ದರು.

























0 comments:
Post a Comment