ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿ ಸರಕಾರ ಆದೇಶ - Karavali Times ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿ ಸರಕಾರ ಆದೇಶ - Karavali Times

728x90

12 August 2026

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿ ಸರಕಾರ ಆದೇಶ

ಬೆಂಗಳೂರು, ಆಗಸ್ಟ್ 12, 2026 (ಕರಾವಳಿ ಟೈಮ್ಸ್) : ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(ಎ) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011ರ ನಿಯಮ 2.3.4ರಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ನಿಷೇಧ ಜಾರಿಗೆ ಬಂದಿದೆ.

ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ನಂತರ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿ ಬಳಸುವಂತೆ ಮಾರಾಟ ಮಾಡುವ ಯಾವುದೇ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳನ್ನು ರಾಜ್ಯದಾದ್ಯಂತ ಮಾರಾಟ ಮಾಡುವುದು ಸಂಪೂರ್ಣವಾಗಿ ಶಿಕ್ಷಾರ್ಹ ಅಪರಾಧವಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿ ಸರಕಾರ ಆದೇಶ Rating: 5 Reviewed By: karavali Times
Scroll to Top