ಮಂಗಳೂರು, ಆಗಸ್ಟ್ 30, 2026 (ಕರಾವಳಿ ಟೈಮ್ಸ್) : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಮೂರು ವರ್ಷಗಳ ಸಂಭ್ರಮದ ಸವಿನೆನಪಿಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಭಾನುವಾರ ರಾತ್ರಿ ಗುಲಾಬಿ ಬಣ್ಣದ (ಪಿಂಕ್ ಲೈಟ್) ಬೆಳಕಿನಲ್ಲಿ ಕಂಗೊಳಿಸುತ್ತಿದೆ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆಗಸ್ಟ್ 30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.
ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ (ಪಿಂಕ್) ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಇದುವರೆಗೂ ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಫಲಾನುಭವಿಗಳ ಖಾತೆಗೆ 76,500 ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿದ್ಯುದ್ದೀಪಾಲಂಕಾರ ಆಯೋಜಿಸಿದೆ.
























0 comments:
Post a Comment