ಮಂಗಳೂರು, ಆಗಸ್ಟ್ 12, 2026 (ಕರಾವಳಿ ಟೈಮ್ಸ್) : ಮಂಗಳೂರು ಜೆಪ್ಪಿಮೊಗರು ಎಂಬಲ್ಲಿ ಆಗಸ್ಟ್ 4 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಮನೆಯ ಕಪಾಟಿನಲ್ಲಿದ್ದ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕ ಇರುವ 2 ಉಂಗುರ ಹಾಗೂ 25 ಸಾವಿರ ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿದ ಪ್ರಕರಣ ಬೇಧಿಸಿರುವ ಪೊಲೀಸರು ಮಾಹಾರಾಷ್ಟ್ರ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಮಧನ ಸಕಹರಿ ನರಳೆ (26) ಎಂದು ಹೆಸರಿಸಲಾಗಿದೆ. ಪ್ರಕರಣದ ಬಗ್ಗೆ ಕಂಕನಾಡಿ ಪೊಲೀಸರು ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡಿದ್ದು, ಆಗಸ್ಟ್ 11 ರಂದು ಆರೋಪಿ ನಗರದ ತಲಪಾಡಿ ಸಮೀಪ ಬಸ್ ಸ್ಟ್ಯಾಂಡ್ ಬಳಿ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದಲ್ಲಿ ಕಳವು ಮಾಡಿರುವ ಸೊತ್ತುಗಳನ್ನು, ಕೃತ್ಯಕ್ಕೆ ಉಪಯೋಗಿಸಿದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.











0 comments:
Post a Comment