ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ ದೇಶ ನಿರ್ಮಾಣಕ್ಕೆ ಕೈಜೋಡಿಸಿ : ಡೀಸಿ ದರ್ಶನ್ ಕರೆ - Karavali Times ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ ದೇಶ ನಿರ್ಮಾಣಕ್ಕೆ ಕೈಜೋಡಿಸಿ : ಡೀಸಿ ದರ್ಶನ್ ಕರೆ - Karavali Times

728x90

15 August 2026

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ ದೇಶ ನಿರ್ಮಾಣಕ್ಕೆ ಕೈಜೋಡಿಸಿ : ಡೀಸಿ ದರ್ಶನ್ ಕರೆ

ಮಂಗಳೂರು, ಆಗಸ್ಟ್ 15, 2026 (ಕರಾವಳಿ ಟೈಮ್ಸ್) : ನಮ್ಮ ಮಾತೃಭೂಮಿಗಾಗಿ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ಎಂದಿಗೂ ಮರೆಯಬಾರದು. ಸ್ವಾತಂತ್ರ್ಯವನ್ನು ಲಘುವಾಗಿ ಪರಿಗಣಿಸದೆ, ಜವಾಬ್ದಾರಿಯುತವಾಗಿ ಅನುಭವಿಸಬೇಕು. ದೇಶ ನಿರ್ಮಾಣದ ಕಾರ್ಯದಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಜಿಲ್ಲಾಧಿಕಾರಿ, ಮನಪಾ ಆಡಳಿತಾಧಿಕಾರಿ ದರ್ಶನ್ ಎಚ್ ವಿ ಕರೆ ನೀಡಿದರು. 

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದೇಶ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. 

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಮಾತನಾಡಿ, ದೇಶದ ಜವಾಬ್ದಾರಿಯುತ ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸಿದಾಗ ಮಾತ್ರ ಸ್ವಾತಂತ್ರ್ಯದ ನಿಜವಾದ ಮೌಲ್ಯ ಅರಿವಾಗುತ್ತದೆ. ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಾವು ಸಹಾನುಭೂತಿಯಿಂದ ನಡೆದುಕೊಳ್ಳಬೇಕು. ಅವರ ಸಮಸ್ಯೆಗಳನ್ನು ಆಲಿಸಿ, ವಿಶ್ಲೇಷಿಸುವುದರಿಂದಲೇ ಶೇ. 50ರಷ್ಟು ಕಾರ್ಯ ಪೂರ್ಣಗೊಂಡಂತಾಗುತ್ತದೆ. ಉಳಿದದ್ದು ಅದರ ಪರಿಣಾಮಕಾರಿ ಅನುಷ್ಠಾನದಲ್ಲಿ ಅಡಗಿದೆ ಎಂದರು. ಕಾರ್ಯಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ ದೇಶ ನಿರ್ಮಾಣಕ್ಕೆ ಕೈಜೋಡಿಸಿ : ಡೀಸಿ ದರ್ಶನ್ ಕರೆ Rating: 5 Reviewed By: karavali Times
Scroll to Top