ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

15 August 2026

ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ, ಆಗಸ್ಟ್ 15, 2026 (ಕರಾವಳಿ ಟೈಮ್ಸ್) : ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಬಿ ಸಿ ರೋಡಿನ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಆಚರಿಸಲಾಯಿತು. 

ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ ಧ್ವಜಾರೋಹಣಗೈದರು. ನ್ಯಾಯವಾದಿ ಉಮೇಶ್ ಕುಮಾರ್ ವೈ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಮುಖ್ಯೋಪಾಧ್ಯಾಯರಾದ ಸಂಕಪ್ಪ ಶೆಟ್ಟಿ, ಜಯರಾಮ್ ಪಡ್ರೆ, ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಪಿ ಮಹಮ್ಮದ್ ಪಾಣೆಮಂಗಳೂರು, ರಜನಿ ಚಿಕ್ಕಯ್ಯ ಮಠ ಸುಭಾಷ್ ಚಂದ್ರ ಜೈನ್, ಪತ್ರಕರ್ತ ಸಲೀಂ ಬೋಳಂಗಡಿ, ಲತೀಫ್ ಶಾಂತಿ ಅಂಗಡಿ ಮೊದಲಾದವರು ಭಾಗವಹಿಸಿದ್ದರು. 

ದೈಹಿಕ ಶಿಕ್ಷಣ ಶಿಕ್ಷಕ ಸಾಯಿರಾಮ್ ನಾಯಕ್ ವಂದಿಸಿ, ನಿವೃತ್ತ ಪ್ರಾಂಶುಪಾಲ ವಿ.ಸು. ಭಟ್ ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top