ಬಂಟ್ವಾಳ, ಆಗಸ್ಟ್ 15, 2026 (ಕರಾವಳಿ ಟೈಮ್ಸ್) : ನಲ್ಕೆಮಾರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಫರಂಗಿಪೇಟೆ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಕೆ. ಕೃಷ್ಣ ಕುಮಾರ್ ಪೂಂಜ ಧ್ವಜಾರೋಹಣಗೈದರು. ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ಮೂರ್ತಿ, ಗ್ರಾ.ಪಂ. ಉಪಾಧ್ಯಕ್ಷೆ ಮೋಹಿನಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯರಾಮ ಸಾಲಿಯಾನ್ ಮೊದಲಾದವರು ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಮೋಹಿನಿ ವಂದಿಸಿದರು. ಸಹ ಶಿಕ್ಷಕಿ ರೇಖಾ ರಾವ್ ಕಾರ್ಯಕ್ರಮ ನಿರೂಪಿಸಿದರು.





















0 comments:
Post a Comment