ಕಡಬ ಆಸಿಡ್ ದಾಳಿ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು - Karavali Times ಕಡಬ ಆಸಿಡ್ ದಾಳಿ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು - Karavali Times

728x90

25 August 2026

ಕಡಬ ಆಸಿಡ್ ದಾಳಿ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಕಡಬ, ಆಗಸ್ಟ್ 25, 2026 (ಕರಾವಳಿ ಟೈಮ್ಸ್) : ಕಡಬ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 06/2020, ಕಲಂ 354ಂ, 509, 504, 506, 448, 307, 326ಎ ಐಪಿಸಿ ಆಸಿಡ್ ದಾಳಿ ಪ್ರಕರಣದ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪಿತ್ತಿದೆ. 

ಶಿಕ್ಷೆಗೊಳಗಾದ ಅಪರಾಧಿಯನ್ನು ಕಡಬ-ಕೋಡಿಂಬಾಳ ನಿವಾಸಿ ಜಯಾನಂದ ಕೆ (60) ಎಂದು ಹೆಸರಿಸಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪ್ರಕರಣದ ಆಗಿನ ತನಿಖಾಧಿಕಾರಿಗಳು ಹಾಗೂ ಪುತ್ತೂರು ಮಹಿಳಾ ಠಾಣಾ ಪೆÇಲೀಸ್ ನಿರೀಕ್ಷಕರಾಗಿದ್ದ ಕುಸುಮಧರ ಅವರು ಆರೋಪಿಯ ವಿರುದ್ದ ಸೂಕ್ತ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಆವರು ಆರೋಪಿಗೆ ಕಲಂ 326ಎ ಐಪಿಸಿ ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಿದೆ. 

ಕಲಂ 504 ಐಪಿಸಿ ಅಡಿಯಲ್ಲಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ (ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ) ವಿಧಿಸಿ ಆದೇಶಿಸಿದ್ದಾರೆ. 

ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯವರ್, ಪ್ರಕಾಶ್ ಚಂದ್ರ ಶೆಟ್ಟಿ, ಶ್ರೀಮತಿ ಜಯಂತಿ ಕೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕಡಬ ಆಸಿಡ್ ದಾಳಿ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು Rating: 5 Reviewed By: karavali Times
Scroll to Top