8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಎಲ್.ಪಿ.ಸಿ. ವಾರಂಟ್ ಆರೋಪಿ ದಸ್ತಗಿರಿ - Karavali Times 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಎಲ್.ಪಿ.ಸಿ. ವಾರಂಟ್ ಆರೋಪಿ ದಸ್ತಗಿರಿ - Karavali Times

728x90

28 August 2026

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಎಲ್.ಪಿ.ಸಿ. ವಾರಂಟ್ ಆರೋಪಿ ದಸ್ತಗಿರಿ

ಮಂಗಳೂರು, ಆಗಸ್ಟ್ 28, 2026 (ಕರಾವಳಿ ಟೈಮ್ಸ್) : ಸುಮಾರು 8  ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಎಲ್ ಪಿ ಸಿ ವಾರೆಂಟ್ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಮೂಲತಃ ಉಳ್ಳಾಲ ಮುಕ್ಕಚ್ಚೇರಿ ಹಿಲೇರಿ ನಗರ ನಿವಾಸಿ, ಪ್ರಸ್ತುತ ಕೇರಳ ರಾಜ್ಯದ ಇರಿಕ್ಕೂರು ಪೆರುವಳತ್ ಪರಂಬು ನಿವಾಸಿ ಮೊಹಮ್ಮದ್ ಬಾವಾ ಉಸ್ತಾದ್ ಎಂಬವರ ಪುತ್ರ ಮುವಾಚ್ (45) ಎಂದು ಹೆಸರಿಸಲಾಗಿದೆ. 

ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೆÇಲೀಸ್ ಠಾಣಾ ಮೊಕದ್ದಮೆ ಸಂಖ್ಯೆ 166/2006 ಕಲಂ 379 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಕಾರಣ ನ್ಯಾಯಾಲಯವು ಈತನ ವಿರುದ್ದ ಎಲ್ ಪಿ ಸಿ ವಾರೆಂಟ್ ಹೊರಡಿಸಿತ್ತು. 

ಆರೋಪಿಯನ್ನು ಮಂಗಳೂರು ಪೂರ್ವ ಪೆÇಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಆಗಸ್ಟ್ 28 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಎಲ್.ಪಿ.ಸಿ. ವಾರಂಟ್ ಆರೋಪಿ ದಸ್ತಗಿರಿ Rating: 5 Reviewed By: karavali Times
Scroll to Top