ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಕ್ತ ವಿವಿ ಕೋರ್ಸ್ : ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಆ 10ರವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಕ್ತ ವಿವಿ ಕೋರ್ಸ್ : ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಆ 10ರವರೆಗೆ ವಿಸ್ತರಣೆ - Karavali Times

728x90

4 August 2026

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಕ್ತ ವಿವಿ ಕೋರ್ಸ್ : ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಆ 10ರವರೆಗೆ ವಿಸ್ತರಣೆ

ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪೆÇ್ಲೀಮಾ/ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಆಗಸ್ಟ್ 10 ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಡ್ಮಿಶನ್ ಲಿಂಕ್ https://minority.ksouportal.com ಮೂಲಕ ಅರ್ಜಿ ಸಲ್ಲಿಸಬಹುದು.

ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತ ಇಲಾಖೆಯ ತಾಲೂಕುವಾರು ಮಾಹಿತಿ ಕೇಂದ್ರಗಳನ್ನು ಹಾಗೂ ಇಲಾಖೆಯ ವೆಬ್‍ಸೈಟ್ ಅಥವಾ ಸಹಾಯವಾಣಿ 8277799990 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಕ್ತ ವಿವಿ ಕೋರ್ಸ್ : ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಆ 10ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top