ಅಪ್ರಾಪ್ತ ಬಾಲಕಗೆ ಕಿರುಕುಳ : ಆರೋಪಿ ಬಂಧಿಸಿದ ವಿಟ್ಲ ಪೊಲೀಸರು - Karavali Times ಅಪ್ರಾಪ್ತ ಬಾಲಕಗೆ ಕಿರುಕುಳ : ಆರೋಪಿ ಬಂಧಿಸಿದ ವಿಟ್ಲ ಪೊಲೀಸರು - Karavali Times

728x90

19 August 2026

ಅಪ್ರಾಪ್ತ ಬಾಲಕಗೆ ಕಿರುಕುಳ : ಆರೋಪಿ ಬಂಧಿಸಿದ ವಿಟ್ಲ ಪೊಲೀಸರು

ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಬಳಿಕ ಬಾಲಕನ ಮನೆಗೆ ಬಂದು ಲೈಂಗಿಕ ಕಿರುಕುಗಳ ನೀಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ವಿಟ್ಲ ಸಮೀಪದ ಕೊಡಂಗಾಯಿ ನಿವಾಸಿ ಉಮೇಶ್ (53) ಎಂದು ಹೆಸರಿಸಲಾಗಿದೆ. ಆಗಸ್ಟ್ 15 ರಂದು ಅಪ್ರಾಪ್ತ ಪ್ರಾಯದ ಬಾಲಕನು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಾ, ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಸದ್ರಿ ಬಸ್ಸಿಗೆ ಬಂದ ಆರೋಪಿಯು ಬಾಲಕನ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿರುವಾಗ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಹಾಗೂ ಬಾಲಕನು ತನ್ನ ಮನೆಗೆ ತೆರಳಿದಾಗ ಆರೋಪಿ ಬಾಲಕನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಒಡ್ಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಉಮೇಶನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಪ್ರಾಪ್ತ ಬಾಲಕಗೆ ಕಿರುಕುಳ : ಆರೋಪಿ ಬಂಧಿಸಿದ ವಿಟ್ಲ ಪೊಲೀಸರು Rating: 5 Reviewed By: karavali Times
Scroll to Top