ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು - Karavali Times ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು - Karavali Times

728x90

1 August 2026

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಬಂಟ್ವಾಳ, ಆಗಸ್ಟ್ 01, 2026 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ರ ಜೂನ್ 23 ರಂದು ಅಪ್ರಾಪ್ತ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ. 

ಶಿಕ್ಷೆಗೊಳಗಾದ ಆರೋಪಿಯನ್ನು ಮಣಿನಾಲ್ಕೂರು ಗ್ರಾಮದ ನಿವಾಸಿ ಮೋನಪ್ಪ ನಾಯ್ಕ (52) ಎಂದು ಹೆಸರಿಸಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಪಿಎಸ್ಸೈಗಳಾದ ಕೀರಪ್ಪ ಘಟಕಾಂಬಳೆ  ಹಾಗೂ ಕೃಷ್ಣಕಾಂತ ಪಾಟೀಲ್ ಅವರು, ಸೂಕ್ತ ಸಾಕ್ಷಿಗಳನ್ನು ಕಲೆಹಾಕಿ, ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಎಫ್ ಟಿ ಎಸ್ ಸಿ-1 ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್ ಜೆ ಎಸ್ ಅವರು ಜುಲೈ 31 ರಂದು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 

ಕಲಂ 74 ಆರ್/ಡಬ್ಲ್ಯು 62 ಕಾಯ್ದೆಯಡಿ ಆರೋಪಿಗೆ 2 ವರ್ಷ 6 ತಿಂಗಳು ಶಿಕ್ಷೆ ಮತ್ತು 15 ಸಾವಿರ ರೂಪಾಯಿ ದಂಡ, ಸೆಕ್ಷನ್ 75(2)(3) ಆರ್/ಡಬ್ಲ್ಯು62 ಬಿ ಎನ್ ಎಸ್ ಕಾಯ್ದೆಗೆ 1 ವರ್ಷ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ, ಸೆಕ್ಷನ್ 79/ಬಿ ಎನ್ ಎಸ್ ಕಾಯ್ದೆಗೆ 1 ವರ್ಷ ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ, ಸೆಕ್ಷನ್ 12 ಆರ್/ಡಬ್ಲ್ಯು 18 ಪೋಕ್ಸೋ ಕಾಯ್ದೆಗೆ 1ವರ್ಷ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ, ಕನ್ಕುರೆಂಟ್ಲಿಗೆ 2 ವರ್ಷ 6 ತಿಂಗಳ ಶಿಕ್ಷೆ ಮತ್ತು 40 ಸಾವಿರ ರೂಪಾಯಿ ದಂಡದ ಶಿಕ್ಷೆ ವಿಧಿಸಿ ನ್ಯಾಯಾಲಯ ಅದೇಶಿಸಿದೆ. ಆರೋಪಿಯ ವಿರುದ್ದ ಸರಕಾರಿ ಅಭಿಯೋಜಕಿ ಸಹನಾದೇವಿ ಅವರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು Rating: 5 Reviewed By: karavali Times
Scroll to Top