ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು - Karavali Times ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು - Karavali Times

728x90

24 August 2026

ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು, ಆಗಸ್ಟ್ 24, 2026 (ಕರಾವಳಿ ಟೈಮ್ಸ್) : ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ದ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿಯನ್ನು ಅದ್ದು ಪಡೀಲ್ ಎಂದು ಹೆಸರಿಸಲಾಗಿದೆ. ಆಗಸ್ಟ್ 23 ರಂದು ರಾತ್ರಿ ವೇಳೆ ಸಂತ್ರಸ್ತ ಬಾಲಕಿಯನ್ನು ಕಾರ್ಯಕ್ರಮವೊಂದರಿಂದ ಆಕೆಯ ಮನೆಗೆ ಬಿಡುವ ಸಲುವಾಗಿ ಆರೋಪಿ ಅದ್ದು ಪಡೀಲ್ ಎಂಬಾತನು ತನ್ನ ದ್ವಿಚಕ್ರ ವಾಹನದಲ್ಲಿ ಕರೆತರುತ್ತಾ, ದಾರಿ ಮಧ್ಯೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 46/2026, ಕಲಂ 75, ಬಿ ಎನ್ ಎಸ್-2023 ಮತ್ತು ಕಲಂ 8, 12 ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು Rating: 5 Reviewed By: karavali Times
Scroll to Top