ಬಂಟ್ವಾಳ, ಆಗಸ್ಟ್ 27, 2026 (ಕರಾವಳಿ ಟೈಮ್ಸ್) : ತಾಲೂಕು ಬಂಟ್ವಾಳ ಹೋಬಳಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜೆ ಜನಾರ್ದನ್ ಅವರು ಮೈಸೂರು ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸಹೊದ್ಯೋಗಿಗಳ ವತಿಯಿಂದ ಆಗಸ್ಟ್ 27 ರಂದು ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ ಗೌರವಿಸಲಾಯಿತು.
ಬಂಟ್ವಾಳ ತಾಲೂಕಾಡಳಿತದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಹೋದ್ಯೋಗಿಗಳು ಅವರಿಗೆ ಶುಭ ಕೋರಿದರು. ಪೇಟಾ ಧರಿಸಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ತಾಲೂಕಿನ ಕಂದಾಯ ಇಲಾಖೆಯಲ್ಲಿ ಸುಧೀರ್ಘ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಜೆ ಜನಾರ್ಧನ್ ಅವರ ಸೇವೆಯನ್ನು ಸಹೋದ್ಯೋಗಿ ಮಿತ್ರರು ಶ್ಲಾಘಿಸಿದರು. ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ತುಂಬೆ, ಖಜಾಂಚಿ ಬಸಯ್ಯ ಆಲಿಮಟ್ಟಿ, ಗೌರವಾಧ್ಯಕ್ಷ ಅಶೋಕ್ ಕುಮಾರ್ ರೈ ಸಹಿತ ಪದಾಧಿಕಾರಿಗಳು, ತಾಲೂಕು ಕಛೇರಿಯ ಎಲ್ಲಾ ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಕಛೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
ಗ್ರಾಮ ಆಡಳಿತ ಅಧಿಕಾರಿಗಳಾದ ನಿತೇಶ್ ಕಡೇಮನಿ ಸ್ವಾಗತಿಸಿ, ಸಂತೋಷ್ ಉಳ್ಳಟ್ಟಿ ವಂದಿಸಿದರು. ಚುನಾವಣಾ ಶಿರಸ್ತೇದಾರ್ ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.























0 comments:
Post a Comment