ನವದೆಹಲಿ, ಆಗಸ್ಟ್ 07, 2026 (ಕರಾವಳಿ ಟೈಮ್ಸ್) : ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್) ಗಡುವನ್ನು ಭಾರತೀಯ ಚುನಾವಣಾ ಆಯೋಗ ಮತ್ತೆ ವಿಸ್ತರಿಸಿದ್ದು, ಮನೆ ಬಾಗಿಲ ಪರಿಶೀಲನೆ ಅವಧಿಯನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅವರ ಮನವಿ ಅನುಸರಿಸಿ ಕೇಂದ್ರ ಚುನಾವಣಾ ಆಯೋಗ ಈ ನಿರ್ಧಾರ ಪ್ರಕಟಿಸಿದೆ.
ಚುನಾವಣಾ ಆಯೋಗವು ಇಂದು ಪರಿಷ್ಕೃತ ವೇಳಾಪಟ್ಟಿ ತಿಳಿಸಿದೆ. ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ತನ್ನ ನಿರ್ಧಾರದ ಬಗ್ಗೆ ತಿಳಿಸಬೇಕು. ಪರಿಷ್ಕೃತ ವೇಳಾಪಟ್ಟಿಯನ್ನು ಲಭ್ಯವಿರುವ ಎಲ್ಲಾ ಮಾಧ್ಯಮಗಳ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ನಿರ್ದೇಶಿಸಿದೆ. ಇದರ ಜೊತೆಗೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಪರಿಷ್ಕೃತ ವೇಳಾಪಟ್ಟಿಯ ಬಗ್ಗೆ ಲಿಖಿತವಾಗಿ ತಿಳಿಸಲು ಕೇಳಿದೆ.
ಮನೆ ಬಾಗಿಲಿಗೆ ಪರಿಶೀಲನೆ ಪ್ರಕ್ರಿಯೆಯು ಈಗ ಆಗಸ್ಟ್ 17ರವರೆಗೆ ಮುಂದುವರಿಯಲಿದ್ದು, ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಆಯೋಗ ತಿಳಿಸಿದೆ. ನಂತರ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಧಿ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಅಕ್ಟೋಬರ್ 22ರೊಳಗೆ ವಿಲೇವಾರಿ ಮಾಡಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುತ್ತದೆ ಎಂದು ಪರಿಷ್ಕøತ ಪಟ್ಟಿಯಲ್ಲಿ ತಿಳಿಸಲಾಗಿದೆ.











0 comments:
Post a Comment