ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ ಸಭೆ - Karavali Times ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ ಸಭೆ - Karavali Times

728x90

14 August 2026

ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ ಸಭೆ

ಮಂಗಳೂರು, ಆಗಸ್ಟ್ 14, 2026 (ಕರಾವಳಿ ಟೈಮ್ಸ್) : ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ಜಿಲ್ಲಾಧಿಕಾರಿ  ದರ್ಶನ್ ಎಚ್.ವಿ ಅಧ್ಯಕ್ಷತೆಯಲ್ಲಿ ವಿವಿಧ ತಾಲೂಕುಗಳಲ್ಲಿ ನಡೆಯಲಿದೆ.

ಆಗಸ್ಟ್  18 ರಂದು ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆ ಬೆಳಿಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.

ಆಗಸ್ಟ್ 20 ರಂದು ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮುಖಂಡರ ಕುಂದು ಕೊರತೆ ಸಭೆ ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಾಗೂ ಸುಳ್ಯ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಕುಂದು-ಕೊರತೆ ಸಭೆ ಮಧ್ಯಾಹ್ನ 3 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಆಗಸ್ಟ್ 21 ರಂದು ಪುತ್ತೂರು/ ಕಡಬ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಮಿತಿ ಸಭೆ ಬೆಳಿಗ್ಗೆ 11 ಗಂಟೆಗೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. 

ಆದುದರಿಂದ ಈ ಸಭೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಹಾಗೂ ಎಲ್ಲಾ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ ಸಭೆ Rating: 5 Reviewed By: karavali Times
Scroll to Top