ಸಜಿಪಮೂಡ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ಸಜಿಪಮೂಡ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

16 August 2026

ಸಜಿಪಮೂಡ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ, ಆಗಸ್ಟ್ 16, 2026 (ಕರಾವಳಿ ಟೈಮ್ಸ್) : ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವ ಶನಿವಾರ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ ಸುಬ್ರಹ್ಮಣ್ಯ ಭಟ್ ಸ್ವಾತಂತ್ರ್ಯೋತ್ಸವ ದಿನದ ಸಂದೇಶ ನೀಡಿದರು. ಕಾಲೇಜು ಪ್ರಾಂಶುಪಾಲೆ ಡಾ ಜೈರಾಬಿ ಸ್ವಾತಂತ್ರ ಇತಿಹಾಸವನ್ನು ಮಕ್ಕಳಿಗೆ ವಿವರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಕೊಟ್ಟಾರಿ, ನಿತಿನ್ ಅರಸ ಶುಭ ಹಾರೈಸಿದರು. ಉಪನ್ಯಾಸಕರಾದ ಬಾಲಕೃಷ್ಣ ಎನ್ ವಿ, ಶೋಭಾ, ಗಾಯತ್ರಿ, ಸುರೇಶ್ ಐತಾಳ, ಬಾಲಕೃಷ್ಣ ನಾಯಕ್, ಸಿಬ್ಬಂದಿಗಳಾದ ಸಂಜೀವ, ಲತಾ ಮೊದಲಾದವರು ಭಾಗವಹಿಸಿದ್ದರು. ಉಪನ್ಯಾಸಕಿ ಭಾರತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಸುಂದರಿ ಸ್ವಾಗತಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಸಜಿಪಮೂಡ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top