ಬಂಟ್ವಾಳ, ಆಗಸ್ಟ್ 28, 2026 (ಕರಾವಳಿ ಟೈಮ್ಸ್) : ಪುದು ಗ್ರಾಮದ ಸುಜೀರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಮುಬಾರಕ್ ಬಿ ಎಂ ಹಾಗೂ ಉಪಾಧ್ಯಕ್ಷರಾಗಿ ಮುಮ್ತಾಝ್ ಆಯ್ಕೆಯಾಗಿದ್ದಾರೆ.
ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 27 ರಂದು ನಡೆದ ಎಸ್ ಡಿ ಎಂ ಸಿ ರಚನಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.
ಸಭೆಯಲ್ಲಿ ಪುದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ ಸ್ಮೃತಿ, ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಪಾಡಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಫಯಾಜ್ ಮಾರಿಪಳ್ಳ, ಶಿಕ್ಷಣ ಇಲಾಖೆಯ ವಿಶೇಷ ಚೇತನ ಮಕ್ಕಳ ಅಧಿಕಾರಿ ಶ್ರೀಮತಿ ಸುರೇಖಾ ಯಾಳವಾರ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮ ಭಾಗವಹಿಸಿದ್ದರು.
18 ಮಂದಿಯನ್ನು ಪೆÇೀಷಕರ ಪರಿಷತ್ತಿನಿಂದ ಸಮಿತಿಗೆ ಆಯ್ಕೆ ಮಾಡಲಾಯಿತು. ಸಹ ಶಿಕ್ಷಕಿ ಶ್ರೀಮತಿ ಸುಮನಾ ಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.





















0 comments:
Post a Comment