ಕಡೆಗೋಳಿ : ಚಾಲಕನ ನಿಯಂತ್ರಣ ಮೀರಿ ಹೆದ್ದಾರಿಯಲ್ಲೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್, ಚಾಲಕ ಪಾರು - Karavali Times ಕಡೆಗೋಳಿ : ಚಾಲಕನ ನಿಯಂತ್ರಣ ಮೀರಿ ಹೆದ್ದಾರಿಯಲ್ಲೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್, ಚಾಲಕ ಪಾರು - Karavali Times

728x90

30 August 2026

ಕಡೆಗೋಳಿ : ಚಾಲಕನ ನಿಯಂತ್ರಣ ಮೀರಿ ಹೆದ್ದಾರಿಯಲ್ಲೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್, ಚಾಲಕ ಪಾರು

ಬಂಟ್ವಾಳ, ಆಗಸ್ಟ್ 30, 2026 (ಕರಾವಳಿ ಟೈಮ್ಸ್) : ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಶನಿವಾರ ಮಧ್ಯರಾತ್ರಿ ವೇಳೆ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ಮೀರಿ ಹೆದ್ದಾರಿ ಡಿವೈಡರಿಗೆ ಡಿಕ್ಕಿ ಹೊಡೆದ ಬಳಿಕ ರಸ್ತೆಯಲ್ಲೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. 

ಮಂಗಳೂರಿನಿಂದ ಬೆಂಗಳೂರು ಕಡೆಗೆ ಎಲ್ ಪಿ ಜಿ ಅನಿಲ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಹೆದ್ದಾರಿ ಡಿವೈಡರಿಗೆ ಡಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಚಾಲಕ ಪಪ್ಪು ಚೌಹಾನ್ ಟ್ಯಾಂಕರಿನೊಳಗೆ ಸಿಲುಕಿಕೊಂಡಿದ್ದರೂ ಯಾವುದೇ ಅಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ. 

ಸ್ಥಳಕ್ಕಾಗಮಿಸಿದ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಟ್ಯಾಂಕರನ್ನು ಹೆದ್ದಾರಿಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಡೆಗೋಳಿ : ಚಾಲಕನ ನಿಯಂತ್ರಣ ಮೀರಿ ಹೆದ್ದಾರಿಯಲ್ಲೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್, ಚಾಲಕ ಪಾರು Rating: 5 Reviewed By: karavali Times
Scroll to Top