ಮಂಗಳೂರು, ಆಗಸ್ಟ್ 11, 2026 (ಕರಾವಳಿ ಟೈಮ್ಸ್) : ಸುರತ್ಕಲ್ ಮಧ್ಯ ಕೊಡಿಪ್ಪಾಡಿಯಲ್ಲಿನ ಕೋರ್ದಬ್ಬು ದೈವಸ್ಥಾನದಲ್ಲಿ ಆಗಸ್ಟ್ 5 ರಂದು ಬೆಳಗ್ಗಿನ ಜಾನ ಸುಮಾರು 1.30ರ ವೇಳೆಗೆ ಕಾಣಿಕೆ ಹುಂಡಿ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಕುಕ್ಕಿಹಳ್ಳ ಗ್ರಾಮದ ಮಂಗಳ ಮಿಲ್ ಕುಕ್ಕಿಕಟ್ಟೆ ಬೆಲ್ಲಪ್ಪಳ್ಳಿ ನಿವಾಸಿ ರಾಮಚಂದ್ರ ನಾಯ್ಕ ಎಂಬವರ ಪುತ್ರ ಸುಖೇಶ್ ನಾಯ್ಕ (40) ಎಂದು ಗುರುತಿಸಲಾಗಿದೆ.
ಆಗಸ್ಟ್ 5 ರಂದು ಬೆಳಗಿನ ಜಾವ ಸುಮಾರು 1.30 ಗಂಟೆಯ ಸಮಯ ಆರೋಪಿ ಕಬ್ಬಿಣದ ಆಯುಧದಿಂದ ದೈವಸ್ಥಾನದ ಬಾಗಿಲು ಮತ್ತು ಕಿಟಕಿಯನ್ನು ಮುರಿದು ಒಳನುಗ್ಗಿ, ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿದ್ದು, ಹುಂಡಿಯಲ್ಲಿದ್ದ ಸುಮಾರು 15 ಸಾವಿರ ರೂಪಾಯಿ ನಗದು ಹಣವನ್ನು ಕಳವುಗೈದಿದ್ದ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪತ್ತೆ ಕಾರ್ಯಕ್ಕಾಗಿ ಪೆÇಲೀಸ್ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಆಗಸ್ಟ್ 10 ರಂದು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಚಾರಿಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈತನನ್ನು ಆಗಸ್ಟ್ 11 ರಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೆÇಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ಹಾಗೂ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೇ ಉಡುಪಿ ಜಿಲ್ಲೆಯ ವಿವಿಧ ಪೆÇಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ ಗಳು ಇರುವುದೂ ಪತ್ತೆಯಾಗಿದೆಯಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.











0 comments:
Post a Comment