ಮಂಗಳೂರು, ಆಗಸ್ಟ್ 11, 2026 (ಕರಾವಳಿ ಟೈಮ್ಸ್) : ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಸರಕಳ್ಳತನ ಪ್ರಕರಣದ ಆರೋಪಿಯನ್ನು ಪಾಂಡೇಶ್ವರ ಪೊಲೀಸರು ಮತ್ತೆ ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ನಿವಾಸಿ ಅಲ್ತಾಫ್ ಹುಸೈನ್ ಎಂದು ಹೆಸರಿಸಲಾಗಿದೆ. ಜೂನ್ 14 ರಂದು ಸೂಟರ್ ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್ ಸೈಕಲಿನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕಾಗಿ ನಡೆಸಿದ ಕಾರ್ಯಾಚರಣೆಯ ಸಂದರ್ಭ ಜೂನ್ 26 ರಂದು ನಗರದ ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವ್ಯಕ್ತಿಗಳನ್ನು ಪೆÇಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಪ್ರಮುಖ ಆರೋಪಿ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೆÇಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ತಳ್ಳಿ ಪೆÇಲೀಸರ ವಶದಿಂದ ಪರಾರಿಯಾಗಿದ್ದನು. ಈ ಘಟನೆಯಲ್ಲಿ ಪೆÇಲೀಸ್ ಸಿಬ್ಬಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಕುರಿತು ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದಲ್ಲಿ ಆರೋಪಿಗಳು ದೋಚಿದ್ದ ಚಿನ್ನದ ಸರ ಮತ್ತು ಬೈಕನ್ನು ಆರೋಪಿಗಳಾದ ಉತ್ತರ ಪ್ರದೇಶ ರಾಜ್ಯದ ನಿವಾಸಿಗಳಾದ ರವಿ ಬೌರಾ ಮತ್ತು ಮೊಹಮ್ಮದ್ ಸಾಹೀಲ್ ಸಿದ್ದೀಖಿ ಅಲಿಯಾಸ್ ಮೊಹಮ್ಮದ್ ಸಾಹಿಲ್ ಎಂಬವರಿಂದ ಪೊಲೀಸರು ವಶಪಡಿಸಿಕೊಂಡಿದ್ದರು.
ಪೆÇಲೀಸರ ವಶದಿಂದ ಪರಾರಿಯಾಗಿದ್ದ ಅಲ್ತಾಫ್ ಹುಸೈನ್ ಪತ್ತೆಗಾಗಿ ವಿಶೇಷ ಪೆÇಲೀಸ್ ತಂಡವನ್ನು ರಚಿಸಲಾಗಿದ್ದು, ವಿಶೇಷ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ, ಆರೋಪಿಯ ಕುರಿತು ಖಚಿತ ಮಾಹಿತಿ ಪಡೆದು ಆಗಸ್ಟ್ 10 ರಂದು ವಿಜಯಪುರ (ಬಿಜಾಪುರ) ನಗರದಲ್ಲಿ ಆರೋಪಿಯನ್ನು ಪಾಂಡೇಶ್ವರ ದಕ್ಷಿಣ ಪೆÇಲೀಸ್ ಠಾಣಾ ಪಿಎಸ್ಸೈ ಮಾರುತಿ ಪಿ ಹಾಗೂ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಸಾಗರ್ ಮತ್ತು ಆಂಜನೇಯ ಅವರುಗಳು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದುಕೊಂಡಿರುತ್ತಾರೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈತನ ವಿರುದ್ದ ರಾಜ್ಯದ ವಿವಿಧ ಭಾಗಗಳಲ್ಲಿ 6 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.











0 comments:
Post a Comment