ಮಂಗಳೂರು, ಆಗಸ್ಟ್ 13, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರದ ಉದ್ದೇಶದಿಂದ ಮಂಗಳೂರು ನಗರ ಪೆÇಲೀಸ್ ವತಿಯಿಂದ ಆಗಾಗ್ಗೆ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ.
ಈ ನಿಟ್ಟಿನಲ್ಲಿ, ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ನೋ ಪಾರ್ಕಿಂಗ್, ಫೂಟ್ ಪಾತ್ ಪಾರ್ಕಿಂಗ್, ರಾಂಗ್ ಪಾರ್ಕಿಂಗ್, ಡಬಲ್ ಪಾರ್ಕಿಂಗ್, ಒಬ್ಸ್ಟ್ರಕ್ಷನ್ ಟ್ರಾಫಿಕ್ ಹಾಗೂ ಇತರೆ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಜೂನ್ 2026 ರಿಂದ ಈವರೆಗೆ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಿ, 3,07,600/- ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇದರಲ್ಲಿ 1080 ಫೂಟ್ ಪಾತ್ ಪಾರ್ಕಿಂಗ್ ಪ್ರಕರಣಗಳು ಒಳಗೊಂಡಿದೆ.
ಅದೇ ರೀತಿ ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟುಗಳನ್ನು ಬಳಸಿಕೊಂಡು ಸಂಚರಿಸುವುದು ಮತ್ತು ಅವುಗಳ ಮೂಲಕ ಅಪರಾಧ ಕೃತ್ಯಗಳನ್ನು ಎಸಗುವುದನ್ನು ತಡೆಗಟ್ಟುವ ಉದ್ದೇಶದಿಂದ 2026 ಆಗಸ್ಟ್ 8 ರಿಂದ 12 ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ದೋಷಪೂರಿತ ನಂಬರ್ ಪ್ಲೇಟ್ ಹೊಂದಿದ್ದ 258 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸದೇ ಸಂಚರಿಸುತ್ತಿದ್ದ 74 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 332 ಪ್ರಕರಣಗಳನ್ನು ದಾಖಲಿಸಿ, 3,01,000/- ರೂಪಾಯಿ ದಂಡ ವಿಧಿಸಲಾಗಿದೆ.
ನಂಬರ್ ಪ್ಲೇಟುಗಳನ್ನು ಸ್ಪಷ್ಟವಾಗಿ, ನಿಯಮಾನುಸಾರ ಹಾಗೂ ವಾಹನಕ್ಕೆ ನಿಗದಿಪಡಿಸಿದ ರೀತಿಯಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ವಾಹನ ಮಾಲೀಕರ ಜವಾಬ್ದಾರಿಯಾಗಿದೆ. ಅದುದರಿಂದ ನಿಗದಿಪಡಿಸಿರುವ ಹೆಚ್.ಎಸ್.ಅರ್.ಪಿ ನಂಬರ್ ಪ್ಲೇಟುಗಳನ್ನೇ ಅಳವಡಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಮಂಗಳೂರು ನಗರ ಪೆÇಲೀಸ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಈ ವಿಶೇಷ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.













0 comments:
Post a Comment