ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಉಸಿರಾಟಕ್ಕೆ ತೊಂದರೆಯಾಗುತ್ತಿದೆ ಎಂದು ಮನೆಯಂಗಳದಲ್ಲಿ ಕುಸಿದು ಬಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಡಗಬೆಳ್ಳೂರು ಗ್ರಾಮದ ಗುಂಡಾಲ ಎಂಬಲ್ಲಿ ಆಗಸ್ಟ್ 16 ರಂದು ಸಂಭವಿಸಿದೆ.
ಮೃತ ಯುವತಿಯನ್ನು ಶ್ರೀಮತಿ ಶೋಭಾ ಜಿ ಎನ್ (31) ಎಂದು ಹೆಸರಿಸಲಾಗಿದೆ. ಈಕೆ ತನ್ನ ಅಣ್ಣ ಶಶಿಕುಮಾರ್ ಅವರ ಮನೆಗೆ ದೈವದ ಕಾರ್ಯಕ್ರಮಕ್ಕೆಂದು ಬಂದಿದ್ದು, ಆಗಸ್ಟ್ 16 ರಂದು ಮನೆಯಲ್ಲಿ ದೈವಗಳ ಕಾರ್ಯಕ್ರಮ ಪ್ರಾರಂಭವಾಗಿರುವ ಸಮಯ ಉಸಿರಾಡಲು ಕಷ್ಟವಾಗುತ್ತಿದೆ ಎಂದು ಮನೆಯಂಗಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಬಿ ಸಿ ರೋಡಿನ ಸೊಮಯಾಜಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಶೋಭಾ ಅವರಿಗೆ ಆಗಾಗ ಎದೆ ನೋವು ಕಾಣಿಸಿಕೊಳ್ಳುತ್ತಿದ್ದು, ಹೃದಯ ಸಂಬಂಧಿ ಕಾಯಿಲೆಯಿಂದಲೋ ಅಥವಾ ಇನ್ಯಾವುದೋ ಖಾಯಿಲೆಯಿಂದ ಬಳಲಿ ಕುಸಿದು ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಆಕೆಯ ಸಹೋದರ ಶಶಿಕುಮಾರ್ ನೀಡಿರುವ ದೂರಿನಂತೆ ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.











0 comments:
Post a Comment