ಬಂಟ್ವಾಳ, ಆಗಸ್ಟ್ 29, 2026 (ಕರಾವಳಿ ಟೈಮ್ಸ್) : ಅಮ್ಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಅಡಿಕೆ ತೋಟದಲ್ಲಿ ಅಡಿಕೆ ಮರ ಕಡಿಯುತ್ತಿದ್ದ ವೇಳೆ ಕುತ್ತಿಗೆಗೆ ಅಡಿಕೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್ 28 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರು ತಾಲೂಕು ಗುರುಪುರ-ಕೈಕಂಬ, ಮೂಡುಪೆರಾಲು-ಶಾಶ್ತಾವು ನಿವಾಸಿ ನಾಗಪ್ಪ ಗೌಡ (59) ಎಂದು ಹೆಸರಿಸಲಾಗಿದೆ. ಇವರು ಆಗಸ್ಟ್ 10 ರಂದು ಬೆಳಿಗ್ಗೆ 10.30ರ ವೇಳೆಗೆ ಅಮ್ಮುಂಜೆ ಗ್ರಾಮದ ಬೆಂಜನಪದವು ಅಂದ್ರೋಸ್ ಫೆರ್ನಾಂಡಿಸ್ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡಲು ಹೋಗಿದ್ದರು. ತೋಟದಲ್ಲಿ ಅಡಿಕೆ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಅಡಿಕೆ ಮರ ಅವರ ಕುತ್ತಿಗೆಯ ಬಳಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು-ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಆಗಸ್ಟ್ 20ರವರೆಗೆ ಚಿಕಿತ್ಸೆಯಲ್ಲಿದ್ದವರು ಬಳಿಕ ಚಿಕಿತ್ಸಾ ವೆಚ್ಚದ ಅನಾನುಕೂಲಕ್ಕಾಗಿ ಅದೇ ದಿನ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಆ 28 ರಂದು ಬೆಳಿಗ್ಗೆ 8.10ಕ್ಕೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ದಯಾನಂದ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.





















0 comments:
Post a Comment