5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times

728x90

5 August 2026

5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ

ಧರ್ಮಸ್ಥಳ, ಆಗಸ್ಟ್ 05, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 65/2017 ಕಲಂ 397, 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 5 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ, ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂಬಾತನನ್ನು ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್ ರಾಜ್  ಅವರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಆಗಸ್ಟ್ 5 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top