ಬಂಟ್ವಾಳ, ಆಗಸ್ಟ್ 24, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಕೆಪಿಡಿಎಲ್ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ, ವಿಟ್ಲಪಡ್ನೂರು ನಿವಾಸಿ ಗಣೇಶ್ (30) ಎಂಬಾತನನ್ನು ಆಗಸ್ಟ್ 23 ರಂದು ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕರು ಮತ್ತು ಉಪ ನಿರೀಕ್ಷಕರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಹರೀಶ್ ಹಾಗೂ ರಮೇಶ್ ಅವರುಗಳು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
24 August 2026
- Blogger Comments
- Facebook Comments
Subscribe to:
Post Comments (Atom)




















0 comments:
Post a Comment