ಬಂಟ್ವಾಳ, ಆಗಸ್ಟ್ 22, 2026 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪೂಂಜಾಲಕಟ್ಟೆ ಠಾಣಾ ಎಚ್ ಸಿ ರಾಜೇಶ್, ಪಿಸಿ ಚೋಳಪ್ಪ ಸಂಶಿ, ನಾಗರಾಜ್ ಅವರುಗಳು ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿ ಆಗಸ್ಟ್ 22 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.











0 comments:
Post a Comment