ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಪೂಂಜಾಲಕಟ್ಟೆ ಪೊಲೀಸರ ವಶಕ್ಕೆ - Karavali Times ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಪೂಂಜಾಲಕಟ್ಟೆ ಪೊಲೀಸರ ವಶಕ್ಕೆ - Karavali Times

728x90

20 August 2026

ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಪೂಂಜಾಲಕಟ್ಟೆ ಪೊಲೀಸರ ವಶಕ್ಕೆ

ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ತೇಲಾಡುತ್ತಿದ್ದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಎಂಬಲ್ಲಿ ಆಗಸ್ಟ್ 19 ರಂದು ಮಧ್ಯಾಹ್ನ ನಡೆದಿದೆ. 

ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಿವಾಸಿ ಅಬ್ದುಲ್ ಸಲೀಂ (34) ಎಂದು ಹೆಸರಿಸಲಾಗಿದೆ. ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಸೈ ರಾಜೇಶ್ ಕೆ ವಿ ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಮಲಿನಲ್ಲಿ ತೇಲಾಡುತ್ತಿದ್ದ ಆರೋಪಿಯ ಬಗ್ಗೆ ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ದ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  

  • Blogger Comments
  • Facebook Comments

0 comments:

Post a Comment

Item Reviewed: ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಪೂಂಜಾಲಕಟ್ಟೆ ಪೊಲೀಸರ ವಶಕ್ಕೆ Rating: 5 Reviewed By: karavali Times
Scroll to Top