ಬೆಂಗಳೂರು ಕಂಟೋನ್ಮೆಂಟ್-ಮಡಂಗಾವ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು - Karavali Times ಬೆಂಗಳೂರು ಕಂಟೋನ್ಮೆಂಟ್-ಮಡಂಗಾವ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು - Karavali Times

728x90

29 September 2026

ಬೆಂಗಳೂರು ಕಂಟೋನ್ಮೆಂಟ್-ಮಡಂಗಾವ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು

ಬೆಂಗಳೂರು, ಸೆಪ್ಟೆಂಬರ್ 29, 2026 (ಕರಾವಳಿ ಟೈಮ್ಸ್) : ವಾರಾಂತ್ಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈರುತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‍ಪ್ರೆಸ್ ರೈಲನ್ನು ಓಡಿಸಲಿದೆ.

ರೈಲು ಸಂಖ್ಯೆ 06597 ಬೆಂಗಳೂರು ಕಂಟೋನ್ಮೆಂಟ್-ಮಡಗಾಂವ್ ವಿಶೇಷ ಎಕ್ಸ್‍ಪ್ರೆಸ್ ರೈಲು ಅಕ್ಟೋಬರ್ 1 ರಂದು ರಾತ್ರಿ 11.50ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಂದ ಹೊರಟು, ಮರು ದಿನ ಅ 2 ರಂದು ಸಂಜೆ 6.10ಕ್ಕೆ ಮಡಗಾಂವ್ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06598 ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‍ಪ್ರೆಸ್ ರೈಲು ಅ 4 ರಂದು ಬೆಳಿಗ್ಗೆ 8.40ಕ್ಕೆ ಮಡಗಾಂವ್ ನಿಂದ ಹೊರಟು, ಅದೇ ದಿನ ರಾತ್ರಿ 11.55ಕ್ಕೆ  ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಮಾರ್ಗ ಮಧ್ಯೆ ಈ ರೈಲು ಎರಡೂ ಮಾರ್ಗಗಳಲ್ಲಿ ಎಸ್ ಎಂ ವಿ ಟಿ ಬೆಂಗಳೂರು, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕನಕೋನ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದ್ದು, ಇದರಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 7 ಸಾಮಾನ್ಯ ದ್ವಿತೀಯ ದರ್ಜೆ ಮತ್ತು ದಿವ್ಯಾಂಗ ಸ್ನೇಹಿ ಬೋಗಿಯನ್ನು ಒಳಗೊಂಡ 2 ಲಗೇಜ್ ಮತ್ತು ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

  • Blogger Comments
  • Facebook Comments

0 comments:

Post a Comment

Item Reviewed: ಬೆಂಗಳೂರು ಕಂಟೋನ್ಮೆಂಟ್-ಮಡಂಗಾವ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು Rating: 5 Reviewed By: karavali Times
Scroll to Top